ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಆರೋಪಿಗಳ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ ಓರ್ವ ಬಾಲಾರೋಪಿಯಾಗಿದ್ದಾನೆ. ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಆರೋಪಿಗಳು ಕೊಲೆ ಹಾಗೂ ಇನ್ನಿತರ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯುಳ್ಳವರು ಎಂಬುದು ಸಾಬೀತಾಗಿದೆ.
ಅತ್ಯಾಚಾರಿಗಳಿಗೆ ಪೊಲೀಸರ ಭಯವಿಲ್ಲ; ಕಾನೂನು ತಿದ್ದುಪಡಿ ಅಗತ್ಯವಿದೆ ಎಂದ ಸಚಿವ ಈಶ್ವರಪ್ಪ
ಗ್ಯಾಂಗ್ ರೇಪ್ ಪ್ರಕರಣದ ಓರ್ವ ಆರೋಪಿ ಪ್ರೀತಿಸಿದ ಹುಡುಗಿಯನ್ನು ಮದುವೆಮಾಡಿ ಕೊಡಲಿಲ್ಲ ಎಂಬ ಕಾರಣಕ್ಕೆ ಹುಡುಗಿಯ ತಂದೆಯನ್ನೇ ಹತ್ಯೆ ಮಾಡಿ ಜೈಲು ಸೇರಿದ್ದ. ತಮಿಳುನಾಡಿನ ತಿರ್ಪೂರ್ ಜಿಲ್ಲೆಯಲ್ಲಿ ಕೊಲೆ ಮಾಡಿದ್ದ ಆರೋಪಿ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಉಳಿದ ಆರೋಪಿಗಳ ಅಪರಾಧ ಹಿನ್ನೆಲೆ ಬಗ್ಗೆ ತನಿಖೆ ಮುಂದುವರೆದಿದೆ.