ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದು, ಆದರೆ ಸಂತ್ರಸ್ತೆ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.
ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರು ಆರೋಪಿಗಳಿದ್ದರು ಎಂದು ಹೇಳಲಾಗಿತ್ತು. ಆದರೆ ವಿಚಾರಣೆ ವೇಳೆ 7 ಆರೋಪಿಗಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಐವರನ್ನು ಮಾತ್ರ ಬಂಧಿಸಲಾಗಿದ್ದು, ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇದೀಗ ಬಂಧಿತ ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಪೊಲೀಸರು ವಿಚಾರಣೆ ನಡೆಸಿದ್ದು, ಗ್ಯಾಂಗ್ ರೇಪ್ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಬೆತ್ತಲೆ ಫೋಟೋ, ವಿಡಿಯೋ: ಹುಡುಗಿಗೆ ಕಿರುಕುಳ ನೀಡಿದ ಇಬ್ಬರು ಅರೆಸ್ಟ್
ಅಲ್ಲದೇ ಆರೋಪಿಗಳು ತಮ್ಮ ಕ್ರಿಮಿನಲ್ ಹಿನ್ನೆಲೆ ಬಗ್ಗೆಯೂ ಬಾಯ್ಬಿಟ್ಟಿದ್ದು, ದರೋಡೆ, ಕೊಲೆ ಪ್ರಕರಣಗಳಲ್ಲೂ ಭಾಗಿಯಾಗಿರುವುದಾಗಿ ಬಾಯ್ಬಿಟ್ಟಿದ್ದಾರೆ. ತಮ್ಮ ವಿರುದ್ಧ ಯಾರೂ ದೂರು ದಾಖಲಿಸದ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ದರೋಡೆ ಕೃತ್ಯಗಳನ್ನು ನಡೆಸುತ್ತಿದ್ದುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ವಿಚಾರಣೆ ವೇಳೆ ಆರೋಪಿಗಳು ಗ್ಯಾಂಗ್ ರೇಪ್ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಸಂತ್ರಸ್ತ ಯುವತಿ ಹೇಳಿಕೆ ನೀಡಲು ನಿರಾಕರಿಸಿದ್ದಾಳೆ. ಸಿಆರ್ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತೆ ತನಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೆ ನೀಡಿದರೆ ಅದು ಮಹತ್ವದ ಸಾಕ್ಷ್ಯವಾಗಲಿದ್ದು, ತನಿಖೆ ಬಹುತೇಕ ಪೂರ್ಣಗೊಳ್ಳಲಿದೆ.