ಮೈಸೂರು: ಎರಡು ವರ್ಷಗಳ ಕೊರೊನಾ ಮಹಾಮಾರಿ ಬಳಿಕ ಈ ವರ್ಷ ವಿಜೃಂಭಣೆಯಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಿಸಲಾಗುತಿದ್ದು, ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.
ಮಧ್ಯಾಹ್ನ 2:36ರಿಂದ 2:50ರ ಶುಭ ಮಕರ ಲಗ್ನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜ ಕಂಭಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ, ನಾಡಿನ ಜನತೆಗೆ ಮತ್ತೊಮ್ಮೆ ದಸರಾ ಹಬ್ಬದ ಶುಭಾಷಯ ಕೋರಿದರು. ಜನತೆಗೆ ತಾಯಿ ಚಾಮುಂಡೇಶ್ವರಿ ಸುಖ-ಶಾಂತಿ- ಸಮೃದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು. ಈ ಬಾರಿ ಮೈಸೂರು ದಸರಾ ವಿಜೃಂಭಣೆಯಿಂದ ನಡೆಯಲಿದ್ದು, ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದಕ್ಕಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.
ಸಂಜೆ 5:7ರಿಂದ 5:18ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದ್ದು, ಅಭಿಮನ್ಯು ಆನೆ ಮೂರನೇ ಬಾರಿಗೆ 750 ಕೆ ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗಲಿದೆ. ಅಭಿಮನ್ಯುವಿಗೆ ಅರ್ಜುನ ನಿಶಾನೆ, ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಸಾಗಲಿವೆ.
ಅರಮನೆಯಿಂದ ಕೆ ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್ ಎಂ ಸಿ, ತಿಲಕ್ ನಗರ ರಸೆಗಳ ಮೂಲಕ ಜಂಬೂ ಸವಾರಿ ಬನ್ನಿ ಮಂಟಪ ತಲುಪಲಿದೆ.