alex Certify BIG NEWS: ಮೈಸೂರು ವಿವಿ ಪರೀಕ್ಷೆಗಳು ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ನಾಳೆಯಿಂದ ಆರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆ ಹೊಸ ದಿನಾಂಕವನ್ನು ಕೂಡ ನಿಗದಿಪಡಿಸಲಾಗಿದೆ.

ಒಂದೇ ದಿನ ಎರಡು ವಿಷಯಗಳ ಪರೀಕ್ಷೆ ನಿಗದಿಯಾಗಿದ್ದರಿಂದ ಪರೀಕ್ಷಾ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ.

ನಾಳೆ ಬದಲು ಸೆಪ್ಟೆಂಬರ್ 13ರಿಂದ ವಿವಿ ಪರೀಕ್ಷೆಗಳು ಆರಂಭವಾಗಲಿದ್ದು, ಪರಿಷ್ಕೃತ ವೇಳಾ ಪಟ್ಟಿ ಶೀಘ್ರ ಪ್ರಕಟಿಸಲಾಗುವುದು ಎಂದು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...