ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಚಾರ್ಜ್ ಶೀಟ್ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆ ಚಾರ್ಜ್ ಶೀಟ್ ನಲ್ಲಿ ಏನೂ ಇಲ್ಲಾ ಅಂತ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾವು ಕಾಂಗ್ರೆಸ್ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದೆವು. ನಾವು ಬಿಡುಗಡೆ ಮಾಡಿದ್ದ ಚಾರ್ಜ್ ಶೀಟ್ ಗೆ ಉತ್ತರ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೊದಲು ಅವರ ಕಾಲದ ಕರ್ಮಕಾಂಡದ ಬಗ್ಗೆ ಉತ್ತರ ಕೊಡಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಚಾರ್ಜ್ ಶೀಟ್ ಬಿಡುಗಡೆ ಆಗುತ್ತೆ ಎಂದು ಗುಡುಗಿದ್ದಾರೆ.