ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ ಬೀಗುತ್ತಿರುವ ಕಾಂಗ್ರೆಸ್ ಪಕ್ಷ ನಾಳೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ನಿಯೋಜಿತ ಡಿಸಿಎಂ ಡಿ.ಕೆ. ಶಿವಕುಮಾರ್, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳನ್ನು ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಜಾರಿಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.
ಗೃಹಿಣಿಯರಿಗೆ ಹಣ ನೀಡುವ ಯೋಜನೆಯನ್ನು ಪ್ರಿಯಾಂಕ ಗಾಂಧಿ ಘೋಷಣೆ ಮಾಡಿದ್ದರು. ನಾನು, ಸಿದ್ದರಾಮಯ್ಯ ಗೃಹ ಜ್ಯೋತಿ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದು, ರಾಹುಲ್ ಗಾಂಧಿಯವರು ಬಸ್ ಪಾಸ್ ಯೋಜನೆಯನ್ನು ಪ್ರಕಟಿಸಿದ್ದರು. ಈ ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಜಾರಿಗೆ ತರುತ್ತೇವೆ ಎಂದರು.