ಬೆಂಗಳೂರು: ಇದೇ ಮೊದಲ ಬಾರಿಗೆ ನಾನು ಹಸಿರು ಬಜೆಟ್- (Eco-Budget) ಮಂಡನೆ ಮಾಡುತ್ತಿದ್ದು, 100 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಪರಿಸರದ ಮೇಲೆ ಮಾನವ ನಿರ್ಮಿತ ಒತ್ತಡಗಳಿಂದ ಉಂಟಾದ ದುಷ್ಪರಿಣಾಮವನ್ನು ಸರಿದೂಗಿಸಲು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಗಳಡಿ ಬೋಳುಗುಡ್ಡ ಪ್ರದೇಶಗಳ ಪುನಶ್ಚೇತನ, ಕ್ಷೀಣಿಸಿದ ಅರಣ್ಯ ಪ್ರದೇಶದ ಮರುಸ್ಥಾಪನೆ, ಕರಾವಳಿ ಪ್ರದೇಶದಲ್ಲಿ ಕಾಂಡ್ಲಾ ಅರಣ್ಯೀಕರಣ ಮತ್ತು ಶೆಲ್ಟರ್ ಬೆಲ್ಟ್ ನಿರ್ವಹಣೆ ಅಡಿಯಲ್ಲಿ 3.211 ಹೆಕ್ಟೇರ್ ಪ್ರದೇಶದಲ್ಲಿ ಹಾಗೂ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ 168 ಕಿ.ಮೀ ಉದ್ದದ ಅರಣ್ಯೀಕರಣ ಹಾಗೂ 25 ಲಕ್ಷ ಸಸಿಗಳನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.