ನವದೆಹಲಿ: ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌಧದ ಸ್ವಯಂ ಘೋಷಿತ ದೇವಮಾನವ ರಾಮ್ ರಹೀಮ್ ಸಿಂಗ್ ಹಾಗೂ ಇತರ ಐವರನ್ನು ಅಪರಾಧಿಗಳು ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
2002 ಜುಲೈ 10ರಂದು ರಂಜಿತ್ ಸಿಂಗ್ ಹತ್ಯೆ ನಡೆದಿತ್ತು. ರಾಮ್ ರಹೀಮ್ ಸಿಂಗ್ ಸೇರಿದಂತೆ ಐವರ ವಿರುದ್ಧ ಕೊಲೆ ಕೇಸ್ ದಾಖಲಾಗಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಕಳೆದ ವಾರ ಸಿಬಿಐ ವಿಶೇಷ ನ್ಯಾಯಾಲಯದಿಂದ ಪ್ರಕರಣವನ್ನು ಬೇರೆ ಕೋರ್ಟ್ ಗೆ ವರ್ಗಾಯಿಸುವಂತೆ ಪಂಜಾಬ್-ಹರಿಯಾಣಾ ಕೋರ್ಟ್ ಗೆ ರಾಮ್ ರಹೀಮ್ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.
ಕ್ರಿಕೆಟರ್ ದೀಪಕ್ ಚಹರ್ ಮನಗೆದ್ದ ಪ್ರೇಯಸಿ ಜಯಾ ಭಾರದ್ವಾಜ್ ಯಾರು ಗೊತ್ತಾ…? ಇಲ್ಲಿದೆ ವಿವರ
ಇದೀಗ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 302 ಕೊಲೆ ಕೇಸ್ ಅಡಿಯಲ್ಲಿ ಗುರ್ಮಿತ್ ರಾಮ್ ರಹೀಮ್ ಸಿಂಗ್ ಹಾಗೂ ಇತರ ಐವರು ದೋಷಿಗಳು ಎಂದು ತೀರ್ಪು ಪ್ರಕಟಿಸಿದೆ. ಈಗಗಾಲೇ ರಾಮ್ ರಹೀಮ್ ಸಿಂಗ್ ತನ್ನ ಆಶ್ರಮದಲ್ಲಿ ಇಬ್ಬರು ಮಹಿಳಾ ಶಿಷ್ಯಂದಿರ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಂಬಂಧ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.