BIG NEWS: ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ; ಕಾಂಗ್ರೆಸ್ ಕೈವಾಡ ಎಂದ ಸಿಎಂ ಬೊಮ್ಮಾಯಿ

ಚಿಕ್ಕಬಳ್ಳಾಪುರ: ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವೇ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟಕ್ಕೆ ಕಾರಣ. ಬಂಜಾರ ಸಮುದಾಯದ ಜನರನ್ನು ಪ್ರಚೋದಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ, ಸಚಿವ ಸಂಪುಟದ ತೀರ್ಮಾನದಂತೆ ಒಳಮೀಸಲಾತಿ ಜಾರಿ ಮಾಡಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟವನ್ನು ಖಂಡಿಸುತ್ತೇನೆ. ಸಮಾಜ ಪ್ರಕ್ಷುಬ್ಧಗೊಳಿಸುವ ಕೆಲಸವನ್ನು ಯಾರೂ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಾಂಗ್ರೆಸ್ ಮಾಡುತ್ತಿರುವ ಶಕುನಿ ಕೆಲಸದ ಬಗ್ಗೆ ಈಗ ರಣದೀಪ್ ಸುರ್ಜೇವಾಲಾ ಮಾತನಾಡಲಿ ಎಂದು ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read