ಬೆಂಗಳೂರು: ಸಂಪುಟ ರಚನೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ಏನು ನಿರ್ಧರಿಸುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.
ದೆಹಲಿ ಪ್ರವಾಸದಿಂದ ವಾಪಸ್ ಆಗಿರುವ ರೇಣುಕಾಚಾರ್ಯ, ಬಿ.ಎಸ್.ಯಡಿಯೂರಪ್ಪ ಭೇಟಿಗೆ ತೆರಳಿದ್ದು, ಇದಕ್ಕೂ ಮುನ್ನ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸದೃಢವಾಗಿದೆ. ಮುಂದೆಯೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಮುಂದಿನ ಚುನಾವಣೆಗೆ ನಾವು ಒಟ್ಟಾಗಿ ಹೋಗುತ್ತೇವೆ. ಕಾಂಗ್ರೆಸ್ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ ಎಂದರು.
ಬ್ಲೂಫಿಲಂ ನಿರ್ಮಾಣ ಪ್ರಕರಣ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಬಿಗ್ ಶಾಕ್
ನಾನು ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ನಡೆಸಿಲ್ಲ. ನಮ್ಮ ನಾಯಕರು ಅವಕಾಶ ಕೊಟ್ಟರೆ ನಿಭಾಯಿಸುತ್ತೇನೆ. ಸಂಪುಟ ರಚನೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಬಿಜೆಪಿ ಹೈಕಮಾಂಡ್ ಏನು ನಿರ್ಧರಿಸುತ್ತೆ ನೋಡಬೇಕು. ಬಿ.ಎಸ್.ವೈ ವರಿಷ್ಠರ ಸೂಚನೆ ಪಾಲಿಸಿದ್ದಾರೆ. ಮುಂದಿನ ಸಿಎಂ ಗೆ ಸಂಪೂರ್ಣ ಬೆಂಬಲ ನೀಡುವಂತೆ ಯಡಿಯೂರಪ್ಪ ಹೇಳಿದ್ದಾರೆ. ಯಡಿಯೂರಪ್ಪ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಹೇಳಿದರು.