ಯಾದಗಿರಿ: ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸಂಭವಿಸಿದ್ದು, ಅತ್ತ ಉತ್ತರ ಒಳನಾಡಿನ ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ರಣ ಬಿಸಿಲಿಗೆ ಜನರು ಬಸವಳಿದಿದ್ದಾರೆ.
ಯಾದಗಿರಿಯಲ್ಲಿ ಕಳೆದ ಒಂದು ವಾರದಿಂದ 45.6 ಡಿಗ್ರಿ ಸೆಲ್ಸಿಯಸ್ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಬಿಸಿಲ ಪ್ರಖರತೆಗೆ ನವಜಾತ ಶಿಶುಗಳು, ಮಕ್ಕಳು ಅನಾರೋಗ್ಯಕ್ಕೀಡಾಗುತ್ತಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 40-45 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ದಾಖಲಾಗಿದೆ. ಇನ್ನು ಕಲಬುರ್ಗಿಯಲ್ಲಿಯೂ 41.8 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣಾಂಶ ದಾಖಲಾಗಿದೆ.