ಮಡಿಕೇರಿ: ಬೆಂಗಳೂರು-ಮೈಸೂರು ಹೆದ್ದಾರಿ ಕ್ರೆಡಿಟ್ ವಾರ್ ಮುಂದುವರೆದಿದ್ದು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಮಡಿಕೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ದಶಪಥ ರಸ್ತೆ ಕ್ರೆಡಿಟ್ ಬಿಜೆಪಿಗೆ ಸಲ್ಲಬೇಕು ಎಂದಿದ್ದಾರೆ. ದಶಪಥ ರಸ್ತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕನಸಿನ ಕೂಸು ಎಂದು ಜೆಡಿಎಸ್ ಜಾಹೀರಾತು ನೀಡಿರುವ ವಿಚಾರವಾಗಿ ಕಿಡಿಕಾರಿರುವ ಈಶ್ವರಪ್ಪ, ಯಾರಿಗೋ ಹುಟ್ಟಿದ ಕೂಸನ್ನು ದೇವೇಗೌಡರು ತಮ್ಮದೆನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಯಾರದ್ದೋ ಕೂಸನ್ನು ತನ್ನದೆನ್ನುತ್ತಿರುವ ದೇವೇಗೌಡರು ಮೊದಲು ಅವರ ಕೂಸು ಯಾವುದು ಎಂಬುದನ್ನು ಅರಿತುಕೊಳ್ಳಲಿ ಎಂದು ಟೀಕಿಸಿದ್ದಾರೆ.
ರಾಜ್ಯದಲಿ ಈ ಬಾರಿ ಬಿಜೆಪಿ ಸಂಪೂರ್ಣ ಬಹುಮತದಿಂದ ಗೆದ್ದು ಮತ್ತೊಮ್ಮೆ ಸರ್ಕಾರ ರಚನೆ ಮಾಡುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.