ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಾಗಲೇ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ.
ಚುನಾವಣೆ ಗೆಲ್ಲುವ ಉದ್ದೇಶಕ್ಕಾಗಿಯೇ ಬಿಜೆಪಿ ವರಿಷ್ಠರು ಹಾಲಿ ಸಿಎಂ ಬದಲಾವಣೆ ಮಾಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.
ಉತ್ತರಾಖಂಡ, ಕರ್ನಾಟಕದ ಬಳಿಕ ಇದೀಗ ಗುಜರಾತ್ ಮುಖ್ಯಮಂತ್ರಿ ಬದಲಾವಣೆ ಮಾಡಿದ್ದು, ಬಿಜೆಪಿ ಹೈಕಮಾಂಡ್ ದಿಢೀರ್ ರಾಜಕೀಯ ಸಂಚಲನವನ್ನು ಸೃಷ್ಟಿಸುತ್ತಿದೆ. 2022ರ ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವಧಿಗೆ ಮುನ್ನವೇ ಬಿಜೆಪಿ ವರಿಷ್ಠರು ರಾಜೀನಾಮೆ ಕೊಡಿಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ವಿಜಯ್ ರೂಪಾನಿ ರಾಜೀನಾಮೆ ಬೆನ್ನಲ್ಲೇ ಗುಜರಾತ್ ಮುಖ್ಯಮಂತ್ರಿ ಹುದ್ದೆಗೆ ಪ್ರಮುಖವಾಗಿ ಎರಡು ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.
ನಾಳೆ ನೀಟ್ ಪರೀಕ್ಷೆ; 16 ಲಕ್ಷ ವಿದ್ಯಾರ್ಥಿಗಳಿಂದ ನೋಂದಣಿ
ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ, ಪುರುಷೋತ್ತಮ್ ರೂಪಾಲಿ ಹೆಸರು ಸಿಎಂ ರೇಸ್ ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿದೆ. ಇವರೊಂದಿಗೆ ನಿತಿನ್ ಪಟೇಲ್, ಸಿಆರ್ ಪಟೇಲ್, ಆರ್ ಸಿ ಫಾಲ್ಡು ಅವರ ಹೆಸರುಗಳು ಕೂಡ ಚರ್ಚೆಯಲ್ಲಿದೆ.