ಬೆಂಗಳೂರು: ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪೇಸಿಎಂ ಅಭಿಯಾನವನ್ನು ಬಿಜೆಪಿ ಸಮರ್ಥವಾಗಿ ಎದುರಿಸಿಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ನವರ ಯಾವ ಕ್ಯಾಂಪೆನ್ ಗೂ ಬಿಜೆಪಿಯವರು ಹೆದರಲ್ಲ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯೂ ಕಾಂಗ್ರೆಸ್ ನವರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಯಾರೋ ಒಬ್ಬ ಗುತ್ತಿಗೆದಾರ ಆರೋಪ ಮಾಡಿದ ಅಂತ ರಾಜ್ಯಾದ್ಯಂತ ಇವರು ಬೊಂಬ್ಡಾ ಹೊಡೆದುಕೊಂಡು ಓಡಾಡ್ತಿದ್ದಾರೆ. ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸಮರ್ಥವಾಗಿ ಎದುರಿಸುತ್ತೇವೆ ಎಂದು ಹೇಳಿದರು.