ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಾಳೆಯಿಂದ ಆರಂಭವಾಗಲಿರುವ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆ ಮಾಡಲು ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕಾಯ್ದೆ ಜಾರಿ ವಿಚಾರ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಕಾಂಗ್ರೆಸ್ ನಾಯಕರು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಸರ್ಕಾರ ಮಸೂದೆ ಮಂಡಿಸಿದಲ್ಲಿ ಅಧಿವೇಶನದಲ್ಲಿ ಕೋಲಾಹಲ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನಗ್ನಳಾಗಿ ವಿಡಿಯೋ ಕಾಲ್ ಮಾಡಲು ವಿದ್ಯಾರ್ಥಿನಿಗೆ ಒತ್ತಡ: ಫೋಟೋ ಮಾರ್ಫ್ ಮಾಡಿ ಬೆದರಿಕೆ
ಈ ಹಿನ್ನೆಲೆಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಖಡಕ್ ಆಗಿ ಉತ್ತರಿಸಿದ ಸಿದ್ದರಾಮಯ್ಯ, ಯಾವ ಕಾರಣಕ್ಕೂ ಕಾಯ್ದೆ ಜಾರಿಗೆ ಬಿಡಲ್ಲ. ದುರುದ್ದೇಶ ಪೂರ್ವಕವಾಗಿ ಬಿಜೆಪಿ ಸರ್ಕಾರ ಇಂತಹ ಕ್ರಮಕ್ಕೆ ಮುಂದಾಗಿದೆ. ಇಂತಹ ಕಾಯ್ದೆ ಜಾರಿಗೆ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.