alex Certify BIG NEWS: ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ; ಅದರ ಅಗತ್ಯವೂ ಇಲ್ಲ; ರೇಣುಕಾಚಾರ್ಯಗೆ ಕೇಂದ್ರ ಸಚಿವ ಜೋಶಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ; ಅದರ ಅಗತ್ಯವೂ ಇಲ್ಲ; ರೇಣುಕಾಚಾರ್ಯಗೆ ಕೇಂದ್ರ ಸಚಿವ ಜೋಶಿ ತಿರುಗೇಟು

ಧಾರವಾಡ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲ. ಸಿಎಂ ಬಿ.ಎಸ್.ಯಡಿಯೂರಪ್ಪನವರ ಬದಲಾವಣೆ ವಿಚಾರವೂ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರ ಹಾಗೂ ಶಾಸಕರ ಸಹಿ ಸಂಗ್ರಹ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಚಿವರು, ನಾಯಕತ್ವ ಬದಲಾವಣೆ ಊಹಾಪೋಹ. ಸಿಎಂ ಪರ ಅಥವಾ ವಿರೋಧ ಯಾವುದೇ ರೀತಿಯ ಸಹಿ ಸಂಗ್ರಹದ ಅಭಿಯಾನವೂ ನಡೆಯುತ್ತಿಲ್ಲ. ಅಂತಹ ಅಗತ್ಯವೂ ಇಲ್ಲ. ಯಡಿಯೂರಪ್ಪನವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾವೆಲ್ಲರೂ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಬಗ್ಗೆ ಯಾವುದೇ ಚರ್ಚೆ ಅವಶ್ಯಕತೆಯಿಲ್ಲ ಎಂದರು.

ಸಿಎಂ ಬಿ ಎಸ್ ವೈ ಹೇಳಿಕೆ ವಿಚಾರ ನಿನ್ನೆಯೇ ಮುಗಿದ ಅಧ್ಯಾಯ. ಅವರ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಯಾವುದೇ ರೀತಿಯ ಸಹಿ ಸಂಗ್ರಹವಾಗಲಿ, ಸಿಎಂ ಬದಲಾವಣೆ ಚರ್ಚೆಯಾಗಲಿ ಮಾಡುವಂತಿಲ್ಲ. ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...