ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ಯುದ್ಧ ಇನ್ನಷ್ಟು ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಭಾರತೀಯರ ಏರ್ ಲಿಫ್ಟ್ ಗೆ ಸಮಸ್ಯೆಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಕನ್ನಡಿಗ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆಯಾದರೂ ಕೊಂಚ ಸಮಸ್ಯೆಯಾಗುತ್ತಿದೆ. ವಿದೇಶಾಂಗ ಸಚಿವರ ಜತೆ ಸಂಪರ್ಕದಲ್ಲಿದ್ದೇನೆ. ವಿದ್ಯಾರ್ಥಿಗಳಿಗೆ ಆಹಾರ, ನೀರು ಒದಗಿಸುವ ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.
BIG NEWS: ಉಕ್ರೇನ್ ರಾಜಧಾನಿಯನ್ನು ಮತ್ತಷ್ಟು ಆಕ್ರಮಿಸಿದ ರಷ್ಯಾ ಪಡೆ…! ಉಪಗ್ರಹ ಚಿತ್ರದಲ್ಲಿ ಚಲನವಲನ ಸೆರೆ
ಕೆಲ ವಿದ್ಯಾರ್ಥಿಗಳು ಈಗಾಗಲೇ ರಾಜ್ಯಕ್ಕೆ ಬಂದಿದ್ದಾರೆ. ಆದರೆ ಇನ್ನೂ ಹಲವು ವಿದ್ಯಾರ್ಥಿಗಳು ಅಲ್ಲಿಯೇ ಸಿಲುಕಿದ್ದಾರೆ. ಯುದ್ಧದಿಂದಾಗಿ ಏರ್ ಲಿಫ್ಟ್ ಸ್ವಲ್ಪ ವಿಳಂಬವಾಗುತ್ತಿದೆ. ಸಮಯ ನೋಡಿಕೊಂಡು ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ. ವಿದ್ಯಾರ್ಥಿಗಳು ಯಾವ ಪ್ರದೇಶದಲ್ಲಿದ್ದಾರೆ, ಅವರಿರುವ ಲೊಕೇಷನ್ ಬಗ್ಗೆಯೂ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲಿ ಕನ್ನಡಿಗ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಮನವಿ ಮಾಡಿದ್ದೇನೆ. ಆದಷ್ಟು ಬೇಗ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದರು.