alex Certify BIG NEWS: ‘ಯುಪಿಎ ಸರ್ಕಾರವಿದ್ದಾಗ ಎತ್ತಿನಗಾಡಿಯಲ್ಲಿ ಬರಬೇಕಿತ್ತು’; ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಯುಪಿಎ ಸರ್ಕಾರವಿದ್ದಾಗ ಎತ್ತಿನಗಾಡಿಯಲ್ಲಿ ಬರಬೇಕಿತ್ತು’; ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ಎತ್ತಿನಗಾಡಿಯಲ್ಲಿ ಬಂದು ಪ್ರತಿಭಟನೆ ಮಾಡಬೇಕಿತ್ತು. ಆಗ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಅರ್ಥ ಬರುತ್ತಿತ್ತು ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸತ್ ಭವನಕ್ಕೆ ವಾಜಪೇಯಿ ಎತ್ತಿನಗಾಡಿಯಲ್ಲಿ ಬಂದಿದ್ದರು ನಾವು ಬಂದರೆ ತಪ್ಪೆ? ಎಂದು ಪ್ರಶ್ನಿಸಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಎತ್ತಿನ ಗಾಡಿ ಚಲೋ ಪ್ರತಿಭಟನೆ ವಿರುದ್ಧ ಕಿಡಿಕಾರಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಬೆಲೆ ಏರಿಕೆಯಾಗಿತ್ತು. ಅಂದು ಎತ್ತಿನಗಾಡಿಯಲ್ಲಿ ಬಂದು ಪ್ರತಿಭಟನೆ ಮಾಡಬೇಕಿತ್ತು. ಆಗ ಇವರ ಪ್ರತಿಭಟನೆಗೆ ಅರ್ಥ ಬರುತ್ತಿತ್ತು ಎಂದಿದ್ದ ಸಿಎಂ ಬೊಮ್ಮಾಯಿ ಹೇಳಿಕೆಗೆ ಕಿಡಿಕಾರಿರುವ ಸಿದ್ದರಾಮಯ್ಯ, ಬೆಲೆ ಏರಿಕೆ ವಿರೋಧಿಸಿ ಪಾರ್ಲಿಮೆಂಟ್ ಗೆ ವಾಜಪೇಯಿಯವರು ಎತ್ತಿನಗಾಡಿಯಲ್ಲಿ ಬಂದಿದ್ದರು. ಆದರೆ ನಾವು ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಬಂದರೆ ತಪ್ಪಾ? ಎಲ್ ಪಿ ಜಿ ಸಿಲಿಂಡರ್ ಬೆಲೆ ಏರಿಕೆಯಾದಾಗ ಹಿಂದೆ ಶೋಭಾ ಕರಂದ್ಲಾಜೆ ತಲೆ ಮೇಲೆ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡಿದ್ದರು. ಶೋಭಾ ಕರಂದ್ಲಾಜೆ ಈಗ ಎಲ್ಲಿಗೆ ಹೋಗಿದ್ದಾರೆ? ಎಂದು ಕುಟುಕಿದರು.

ಈ ದೇವಸ್ಥಾನದಲ್ಲಿ ಪ್ರತಿ ಅಮಾವಾಸ್ಯೆಯ ಹಿಂದಿನ ದಿನ ಹರಿಯುತ್ತದೆ ಹಣ, ಚಿನ್ನಾಭರಣಗಳ ಹೊಳೆ…..!

ನಾನು ನಮ್ಮ ರಾಜ್ಯದ ಜನತೆಯ ಬಗ್ಗೆ ಕಾಳಜಿಯಿಂದ ಮಾತನಾಡುತ್ತಿದ್ದೇನೆ. ಪೆಟ್ರೋಲ್, ಡೀಸೆಲ್ ಮೇಲೆ ನಮ್ಮ ರಾಜ್ಯದಲ್ಲಿ ಹೆಚ್ಚು ತೆರಿಗೆ ವಸೂಲಿ ಮಾಡಲಾಗುತ್ತಿದೆ. ಅದನ್ನು ಮೊದಲು ಕಡಿಮೆ ಮಾಡಲಿ ಎಂದು ಆಗ್ರಹಿಸಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ಬೆಲೆ 110 ಡಾಲರ್ ಮೇಲಿತ್ತು. ಆದರೂ ಕಡಿಮೆ ದರದಲ್ಲಿ ಪೆಟ್ರೋಲ್ ನೀಡಲಾಗುತ್ತಿತ್ತು. ಈಗ ಕಚ್ಚಾ ತೈಲ ಬೆಲೆ 70 ಡಾಲರ್ ಇದೆ. ಆದರೆ ಪೆಟ್ರೋಲ್ 100 ರೂ. ಗಡಿ ದಾಟಿದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಪ್ರತಿ ಲೀಟರ್ ಮೇಲೆ 3.45 ರೂ. ಮಾತ್ರ ತೆರಿಗೆ ವಿಧಿಸಲಾಗುತ್ತಿತ್ತು. ಈಗ 33 ರೂಗಳಷ್ಟು ಪ್ರತಿ ಲೀಟರ್ ಮೇಲೆ ತೆರೆಗೆ ವಿಧಸಲಾಗುತ್ತಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟ ವಿವರಣೆ ನೀಡಲಿ ಎಂದು ಸವಾಲು ಹಾಕಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...