alex Certify BIG NEWS: ಯುವಕರಿಗೆ ನಿರುದ್ಯೋಗ ಭತ್ಯೆಯಾಗಿ 3000 ರೂ; ಕಾಂಗ್ರೆಸ್ 4ನೇ ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವಕರಿಗೆ ನಿರುದ್ಯೋಗ ಭತ್ಯೆಯಾಗಿ 3000 ರೂ; ಕಾಂಗ್ರೆಸ್ 4ನೇ ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ ಗಾಂಧಿ

ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲ್ಕನೇ ಗ್ಯಾರಂಟಿ ಯೋಜನೆ ಘೋಷಿಸಿದ್ದಾರೆ. ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವುದಾಗಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಅವರು, ಯುವನಿಧಿ ಹೆಸರಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3000 ರೂಪಾಯಿ , ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುವುದು ಎಂದು ಘೋಷಿಸಿದರು.

ಇದೇ ವೇಳೆ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದ ರಾಹುಲ್ ಗಾಂಧಿ, ಕರ್ನಾಟಕದಲ್ಲಿ 140 ಸ್ಥಾನಗಳಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...