ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಆರೋಪಿ ನಾಗೇಶ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಈ ನಡುವೆ ಯುವತಿ ಹೇಳಿಕೆ ಪಡೆದು ಕಾಮಾಕ್ಷಿ ಪಾಳ್ಯ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಆಸಿಡ್ ದಾಳಿಯಿಂದ ಆಸ್ಪತ್ರೆಗೆ ದಾಖಲಾಗಿರುವ ಯುವತಿ ಹೇಳಿಕೆ ಪಡೆದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಮೊಬೈಲ್ ಲೊಕೇಷನ್ ಆಧಾರದ ಮೇಲೆ ಆರೋಪಿ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.
‘ಮನಸ್ಮಿತ’ ಸಿನಿಮಾದ ಎರಡನೇ ಹಾಡಿಗೂ ಪ್ರೇಕ್ಷಕರು ಫಿದಾ
ಆಸಿಡ್ ದಾಳಿ ಬಳಿಕ ನಾಗೇಶ್ ಸಿಟಿ ಸಿವಿಲ್ ಕೋರ್ಟ್ ವರೆಗೆ ಹೋಗಿದ್ದು, ಬಳಿಕ ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದಾನೆ ಎನ್ನಲಾಗಿದೆ. ವಕೀಲರನ್ನು ಭೇಟಿಯಾಗಲು ಕೋರ್ಟ್ ಬಳಿ ತೆರಳಿದ್ದ ಆರೋಪಿ ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಆಸ್ಪತ್ರೆಗೆ ಭೇಟಿ ನೀಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಸಂತ್ರಸ್ತೆ ಆರೋಗ್ಯ ವಿಚಾರಿಸಿದ್ದು, ಯುವತಿಗೆ ಶೇ.40-50ರಷ್ಟು ಗಾಯಗಳಾಗಿದ್ದು, ಸಧ್ಯ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಯುವತಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ತಿಳಿಸಿದರು.