ಬೆಳಗಾವಿ: ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೀತಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗಾವಿ ಚಲೋ ಪಾದಯಾತ್ರೆಗೆ ಕರೆ ನೀಡಿದ್ದು, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ ಹಾಗೂ ಮೊಹಮ್ಮದ್ ನೆಲಪಾಡ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಪಾದಯಾತ್ರೆ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಸಾಸ್ ಬಾಟಲಿ ಮೇಲೆ 57ರ ಸಂಖ್ಯೆ ಬರೆದಿರಲು ಕಾರಣವೇನು…..?
ಯುವಕರಿಗೆ ಉದ್ಯೋಗ ನೀಡಿ ಅಥವಾ ನಿರುದ್ಯೋಗಿಗಳಿಗೆ 9 ಸಾವಿರ ರೂಪಾಯಿ ಮಾಸಿಕ ಭತ್ಯೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಪಾದಯಾತ್ರೆ ಸುವರ್ಣಸೌಧದ ಹೊರಭಾಗದ ಹಲಗಾ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ಪ್ರತಿಭಟನಾ ನಿರತ ಕಾರ್ಯಕರ್ತರಿಗೆ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡ್ ಗೆ ತೆರಳುವಂತೆ ಪೊಲೀಸರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಸುವರ್ಣಗಾರ್ಡನ್ ಬಳಿ ಪ್ರತಿಭಟನಾಕಾರರು ಜಮಾಯಿಸಿದ್ದು, ಧರಣಿ ಮುಂದುವರೆಸಿದ್ದಾರೆ.