ಬೆಂಗಳೂರು: ನೂತನ ಸಂಪುಟದಲ್ಲಿ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದ ಆನಂದ ಮಾಮನಿ ತಮ್ಮ ನಿರ್ಧಾರ ಬದಲಿಸಿದ್ದು, ರಾಜೀನಾಮೆ ನೀಡಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಸಂಪುಟದಲ್ಲಿ ನನಗೂ ಮಂತ್ರಿ ಸ್ಥಾನ ನೀಡುವ ನಿರೀಕ್ಷೆ ಇತ್ತು. ಒಂದೊಮ್ಮೆ ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದೆ. ಆದರೆ ಬಿಜೆಪಿ ನಾಯಕರು ರಾಜೀನಾಮೆ ನಿರ್ಧಾರ ಬದಲಿಸುವಂತೆ ಮನವಿ ಮಾಡಿದ್ದಾರೆ. ಹಿರಿಯರ ಸೂಚನೆ ಮೇರೆಗೆ ನನ್ನ ನಿರ್ಧಾರ ಕೈಬಿಟ್ಟಿದ್ದಾಗಿ ತಿಳಿಸಿದ್ದಾರೆ.
ಈ ಬಾರಿ ಸಚಿವ ಸಂಪುಟದಲ್ಲಿ ತನಗೂ ಮಂತ್ರಿಗಿರಿ ನೀಡಬೇಕು. ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಬಿಜೆಪಿಯಲ್ಲಿ ಅನುಭವಿ ಹಾಗೂ ಹಿರಿಯ ನಾಯಕನಾಗಿದ್ದೇನೆ. ಒಂದು ವೇಳೆ ಮಂತ್ರಿ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು.