ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬೇಗುದಿ ಬೂದಿಮುಚ್ಚಿದ ಕೆಂಡದಂತಿದ್ದು, ಆಗಾಗ ಬದಲಾವಣೆ ಕೂಗನ್ನು ಜೀವಂತವಾಗಿಡುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆದಿವೆ. ಇದೀಗ ಸಚಿವ ಸಿ.ಪಿ. ಯೋಗೇಶ್ವರ್ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ಸಹ ದೆಹಲಿಗೆ ದೌಡಾಯಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಎರಡು ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಸಚಿವ ಯೋಗೇಶ್ವರ್ ಇಂದು ರಾಜ್ಯಕ್ಕೆ ವಾಪಸ್ ಆಗಿದ್ದು, ಇದೀಗ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣಿಸಿದ್ದಾರೆ. ಸಂಜೆ ವೇಳೆಗೆ ಹೈಕಮಾಂಡ್ ಭೇಟಿಯಾಗಿ ಚರ್ಚೆ ನಡೆಸಲಿದ್ದು, ಸರ್ಕಾರದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರ ಹಾಕಲಿದ್ದಾರೆ ಎನ್ನಲಾಗಿದೆ.
ನೀರಿನಲ್ಲಿ ಕುಸಿದ ಆಮ್ಲಜನಕ ಪ್ರಮಾಣ: ನೂರಾರು ಮೀನುಗಳ ಮಾರಣಹೋಮ
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ, ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಹಾಗೂ ಹಲವು ಗೊಂದಲಕ್ಕೆ ತೆರೆ ಎಳೆದು ಹೋಗಿದ್ದರೂ ತೆರೆ ಮರೆಯಲ್ಲಿ ಸಿಎಂ ಬದಲಾವಣೆ ಪ್ರಯತ್ನಗಳು ಮತ್ತೆ ಮುಂದುವರೆದಿದೆ. ಅದರಲ್ಲಿಯೂ ಕೇಂದ್ರ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.