ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಭೇಟಿಯಾಗಿ ಪ್ರತ್ಯೇಕವಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸುರ್ಜೇವಾಲಾ ಭೇಟಿ ಬಗ್ಗೆ ಮಾತನಾಡಿದ ಜಿ. ಪರಮೇಶ್ವರ್, ನಾನು 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಈ ಅನುಭವದ ಆಧಾರದ ಮೇಲೆ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಕೆಲ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ ಎಂದರು.
ಕೆಲವು ಭಿನ್ನಾಭಿಪ್ರಾಯಗಳು ಇರಬಹುದು. ಹಾಗಂತ ಅದನ್ನು ಅಸಮಾಧಾನ ಎಂದು ಅರ್ಥೈಸುವುದು ಸರಿಯಲ್ಲ. ನನ್ನ ಅಭಿಪ್ರಾಯಗಳನ್ನು ರಣದೀಪ್ ಸುರ್ಜೇವಾಲಾ ಬಳಿ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.