ಹೈದರಾಬಾದ್: ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳಲ್ಲಿ ರಣಭೀಕರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಕಡಪ ಹಾಗೂ ಚಿತ್ತೂರು ಜಿಲ್ಲೆಗಳು ನಲುಗಿ ಹೋಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಗೆ ಇದುವರೆಗೂ 17 ಜನರು ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಣ್ಣಂಚನ್ನು ತೇವಗೊಳಿಸುತ್ತೆ ಪುಟ್ಟ ಕಂದನ ಹೃದಯಸ್ಪರ್ಶಿ ವಿಡಿಯೋ
ತಮಿಳುನಾಡಿನಾದ್ಯಂತ ಭಾರಿ ಮಳೆಯಿಂದಾಗಿ ಪೂಂಡಿ ಜಲಾಶಯದಿಂದ ಸುಮಾರು 30,000ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಿರುವಳ್ಳೂರು ಜಿಲ್ಲಾಡಳಿತ ಮನಾಲಿ ಹಾಗೂ ಎನ್ನೋರ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಎಚ್ಚರಿಕೆ ನೀಡಿದ್ದು, ಪ್ರವಾಹ ಭೀತಿ ಎದುರಾಗಿದೆ.
ಕೇರಳದಲ್ಲಿ ವರುಣಾರ್ಭಟ ಜೋರಾಗಿದ್ದು, ಪಂಪಾ ನದಿ ಸೇರಿದಂತೆ ಹಲವು ನದಿಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ರೋಹಿತ್ ತಂಡದ ಗೆಲುವಿಗೆ ಕಾರಣರಾದ್ರು ಕೊಹ್ಲಿ ತಂಡದಲ್ಲಿ ಸ್ಥಾನ ವಂಚಿತ ಈ ಆಟಗಾರ
ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ನಿರಂತರ ಮಳೆಗೆ ವಿಜಯನಗರ ಜಿಲ್ಲೆಯ ಉಚ್ಚಂಗಿದುರ್ಗದ ಐತಿಹಾಸಿಕ ತಂಗುದಾಣ ಕುಸಿದು ಬಿದ್ದಿದೆ. ಮಳೆ ನಿಲ್ಲುವವರೆಗೆ ಭಕ್ತರಿಗೆ ಕ್ಷೇತ್ರಕ್ಕೆ ಬರದಂತೆ ಮನವಿ ಮಾಡಲಾಗಿದೆ.
ಬಳ್ಳಾರಿಯಲ್ಲಿ ರಾರಾವಿ ಬ್ರಿಡ್ಜ್ ಮೇಲೆ ವಾಹನ ಸಂಚಾರವನ್ನೇ ಬಂದ್ ಮಾಡಲಾಗಿದೆ. ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿರುವ ಈ ಬ್ರಿಡ್ಜ್, ಕರ್ನಾಟಕ-ಆಂಧ್ರ ನಡುವೆ ಸಂಪರ್ಕ ಕಲ್ಪಿಸುತ್ತದೆ.
ಇನ್ನು ಚಿಕ್ಕಮಗಳೂರಿನ ತರಿಕೆರೆಯಲ್ಲಿ ವ್ಯಕ್ತಿಯೋರ್ವ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರೆ, ದಾವಣಗೆರೆಯಲ್ಲಿ ಕೊಟ್ಟಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ಮಳೆ ಅವಾಂತರದಿಂದಾಗಿ ರಾಜ್ಯದ ಜನತೆ ಕಂಗಾಲಾಗಿದ್ದಾರೆ.