alex Certify BIG NEWS: ರಣಾಂಗಣವಾದ ರೈತರ ಮುಖಂಡರ ಸಭೆ; ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಣಾಂಗಣವಾದ ರೈತರ ಮುಖಂಡರ ಸಭೆ; ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆ

ಬೆಂಗಳೂರು: ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸಭೆ ವೇಳೆಯೇ ಭಾರತೀಯ ಕಿಸಾನ್ ಯುನಿಯನ್ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಎರಚಿ ಹಲ್ಲೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರೈತ ಮುಖಂಡರ ಸಭೆ ವೇಳೆ ಏಕಾಏಕಿ ಗೊಂದಲ, ಗಲಾಟೆ ಆರಂಭವಾಗಿದ್ದು, ರೈತ ಮುಖಂಡ ರಾಕೇಶ್ ಟಿಕಾಯತ್ ಹಾಗೂ ಯಧುವೀರ್ ಸಿಂಗ್ ಮೇಲೆ ಮಸಿ ಎರಚಲಾಗಿದೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ರಾಕೇಶ್ ಟಿಕಾಯತ್, ನಾವು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಕೋಡಿಹಳ್ಳಿ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುತ್ತಿದ್ದಂತೆ ಮುಖಂಡರ ನಡುವೆ ವಾಗ್ವಾದ ಆರಂಭವಾಗಿದೆ. ಕುರ್ಚಿಯನ್ನು ಎಳೆದಾಡಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಟಿಕಾಯತ್ ಹಾಗೂ ಯಧುವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...