ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ.
ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್, ವಾದಿ ಹಾಗೂ ಪ್ರತಿ ವಾದಿ ವಕೀಲರನ್ನು ತರಾಟೆಗೆ ತೆಗೆದುಕೊಂಡರು. ಲಿಖಿತ ವಾದಾಂಶಗಳ ಸಲ್ಲಿಕೆಗೆ ವಿಳಂಬವಾಗಲು ಕಾರಣವೇನು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಸಂತ್ರಸ್ತ ಯುವತಿ ಪರ ವಕೀಲೆ ಇಂದಿರಾ ಜೈ ಸಿಂಗ್, ಪ್ರತಿವಾದಿಗಳ ವಾಂದಾಂಶ ಇನ್ನೂ ನಮಗೆ ಸಿಕ್ಕಿಲ್ಲ ಹಾಗಾಗಿ ತಡವಾಗುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಲಿಖಿತ ವಾದಾಂಶ ಸಲ್ಲಿಕೆ ಬಳಿಕವೇ ವಿಚಾರಣೆ ನಡೆಸಲಾಗುವುದು ಎಂದು ದಸರಾ ನಂತರದ ದಿನಕ್ಕೆ ವಿಚಾರಣೆಯನ್ನು ಮುಂದೂಡಿದರು.