ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐ ಟಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜುಲೈ 20ಕ್ಕೆ ವಿಚಾರಣೆ ಮುಂದೂಡಿದೆ.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ ಐ ಟಿ ರಚಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವ ಅಗತ್ಯವಿದೆ. ಹಾಗಾಗಿ ಪ್ರಕರಣ ಸಂಬಂಧ ಎಲ್ಲಾ ಎಫ್ ಐ ಆರ್ ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುವಂತೆ ಎಜಿ ಗೆ ಹೈಕೋರ್ಟ್ ಸೂಚಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಎಜಿ ಪ್ರಭುಲಿಂಗ ನಾವದಗಿ, ಜುಲೈ 19ರಂದು ಮುಚ್ಚಿದ ಲಕೋಟೆಯಲ್ಲಿ ತನಿಖೆ ಮುಕ್ತಾಯದ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಸಚಿವ ʼಮಾಸ್ಕ್ʼ ಹಾಕಿಕೊಂಡಿದ್ದೆಲ್ಲಿಗೆ ಅಂತ ತಿಳಿದ್ರೆ ಶಾಕ್ ಆಗ್ತೀರಾ….!
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.