ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇನ್ನೂ ತಣ್ಣಗಾದಂತೆ ಕಾಣುತ್ತಿಲ್ಲ. ಈ ನಡುವೆಯೇ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೊಸ ವರಸೆ ಆರಂಭಿಸಿದ್ದು, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಮಳೆಯಲ್ಲೇ ʼಆನ್ ಲೈನ್ʼ ಕ್ಲಾಸ್ ಅಟೆಂಡ್ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ
ಸಿಡಿ ಪ್ರಕರಣದಿಂದಾಗಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ತಮ್ಮ ನಿರೀಕ್ಷೆಯಂತೆ ಬೆಂಬಲಕ್ಕೆ ನಿಂತಿಲ್ಲ. ಮಿತ್ರಮಂಡಳಿಯ ಕೆಲ ನಾಯಕರೇ ತಮ್ಮ ವಿರುದ್ಧ ತಂತ್ರ ಹೆಣೆಯುತ್ತಿದ್ದಾರೆ ಎನ್ನುವ ಕಾರಣ ನೀಡಿ ತನ್ನಿಂದ ಸರ್ಕಾರಕ್ಕೆ ಮುಜುಗರವಾಗುವುದಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಸಿದ್ಧರಾಮಯ್ಯ ಮುಂದಿನ ಸಿಎಂ, ಜಮೀರ್ ನಂತ್ರ ಡಿಕೆಶಿಗೆ ಕಾಂಗ್ರೆಸ್ ನ ಮತ್ತೊಬ್ಬ ಶಾಸಕ ಟಾಂಗ್…?
ಇದೇ ವಿಚಾರವಾಗಿ ಮುಂಬೈಗೆ ತೆರಳಿರುವ ರಮೇಶ್ ಜಾರಕಿಹೊಳಿ ಹಿರಿಯ ಬಿಜೆಪಿ ನಾಯಕರನ್ನು ಭೇಟಿಯಾಗಿ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದು, ಇದೇ ವೇಳೆ ತಮ್ಮ ಪುತ್ರ ಅಮರನಾಥ ಜಾರಕಿಹೊಳಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡಬೇಕು ಎಂಬ ನಿಟ್ಟಿನಲ್ಲಿ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.