
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಾಮ್ ನಗರ್ ಉತ್ತರ ಕ್ಷೇತ್ರದಿಂದ ಕಣಕ್ಕಿಳಿದಿರುವ ಖ್ಯಾತ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಹಿನ್ನಡೆ ಸಾಧಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕರ್ಶಾನ್ ಭಾಯ್ ಕರ್ಮೂರ್ ಇಲ್ಲಿ ಮುನ್ನಡೆಯಲ್ಲಿದ್ದಾರೆ.
ಇವರಿಬ್ಬರ ನಡುವೆ ನಾಲ್ಕು ಸಾವಿರಕ್ಕೂ ಅಧಿಕ ಮತಗಳ ಅಂತರ ಇದೆ ಎನ್ನಲಾಗಿದ್ದು, ಇನ್ನೂ ಹಲವು ಸುತ್ತಿನ ಮತ ಎಣಿಕೆ ಬಾಕಿ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರ ಬಿಜೆಪಿಗೆ ಒಲಿದಿದ್ದು, ಜಡೇಜಾ ಧರ್ಮೇಂದ್ರ ಸಿನ್ಹಾ ಆಯ್ಕೆಯಾಗಿದ್ದರು.