ಬೆಂಗಳೂರು: ರಸ್ತೆ ಕಾಮಗಾರಿ ನಡೆಸುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನಡೆದಿದೆ.
ಏರ್ ಪೋರ್ಟ್ ಬಳಿಯ ಎರಡನೇ ಟರ್ಮಿನಲ್ ಬಳಿ ಅಂಡರ್ ಪಾಸ್ ನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ವೈಟ್ ಟಾಪಿಂಗ್ ಮಾಡುವ ಮಷಿನ್ ಗೆ ಅಳವಡಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮ ಕ್ಯಾಂಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.