alex Certify BIG NEWS: ರಸ್ತೆ ಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ; ನಿವೃತ್ತ ಯೋಧ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಸ್ತೆ ಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ; ನಿವೃತ್ತ ಯೋಧ ಸ್ಥಳದಲ್ಲೇ ದುರ್ಮರಣ

ಮಂಡ್ಯ: ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರಸ್ತೆ ಗುಂಡಿಗಳ ಅವಾಂತರಕ್ಕೆ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ.

ರಸ್ತೆ ಗುಂಡಿಗೆ ನಿವೃತ್ತ ಯೋಧ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕಾರಿಮನೆ ಬಳಿ ನಡೆದಿದೆ. 39 ವರ್ಷದ ಎಸ್.ಎನ್.ಕುಮಾರ್ ಮೃತ ಯೋಧ. ಕುಮಾರ್ ತನ್ನ ತಂದೆ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸು ಹೋಗಿ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಲಾರಿ ಕುಮಾರ್ ಮೇಲೆಯೇ ಹರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕುಮಾರ್ ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಬಳಿಕ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...