ಬೆಂಗಳೂರು: ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಶಫಿ (55), ಶಮಾ (50) ಮೃತರು. ಕೆಂಪೇಗೌಡ ಏರ್ ಪೋರ್ಟ್ ಗೆ ಮಗಳನ್ನು ಬಿಟ್ಟು ವಾಪಸ್ ಊರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ.
ಗೌನಪಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.