ಕಾರವಾರ: ಭೀಕರ ಕಾರು ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮಹಮ್ಮದ್ ಉನೈಸ್ ಅಮ್ಜೆಡ್ ಖತೀಬ್ (20) ಮೃತ ವಿದ್ಯಾರ್ಥಿ. ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ ಕಾರು ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಟ್ಕಳದ ಅಂಜುಮನ್ ಎಂಜಿನಿಯರಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳು ಶಿರೂರಿನಿಂದ ಭಟ್ಕಳ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ.