ರಾಕಿಂಗ್ ಸ್ಟಾರ್ ಯಶ್ ಅಭಿನಯದ ʼಕೆಜಿಎಫ್ ಚಾಪ್ಟರ್ 2ʼ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಈಗಾಗಲೇ ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಮಾಡಿರುವ ಈ ಚಿತ್ರ ʼದಂಗಲ್ʼ ಹಾಗೂ ʼಬಾಹುಬಲಿʼ ನಂತರದ ಸ್ಥಾನದಲ್ಲಿದೆ.
ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಚಿತ್ರ ಬಿಡುಗಡೆಗೊಂಡಿದ್ದು, ವಿದೇಶಗಳಲ್ಲೂ ಅತ್ಯುತ್ತಮ ಗಳಿಕೆ ಮಾಡಿದೆ. ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಾಕಿಂಗ್ ಸ್ಟಾರ್ ಯಶ್ ಇಂದು ತಮ್ಮ ಪತ್ನಿ ರಾಧಿಕಾ ಪಂಡಿತ್ ಹಾಗೂ ಕೆಜಿಎಫ್ ಚಿತ್ರ ತಂಡದೊಂದಿಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರನ್ನು ಭೇಟಿ ಮಾಡಿದ್ದಾರೆ.
ಪಣಜಿಯಲ್ಲಿ ತಾವು ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್ ಹಾಗೂ ಕೆಜಿಎಫ್ ಚಿತ್ರತಂಡವನ್ನು ಭೇಟಿಯಾದ ಕುರಿತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಇದೊಂದು ಸೌಜನ್ಯದ ಭೇಟಿ ಎನ್ನಲಾಗಿದೆ.