ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಲವೆಡೆ ಸಮಸ್ಯೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ 714 ಕಟ್ಟಡಗಳ ಪಟ್ಟಿ ಸಿದ್ಧಪಡಿಸಿದೆ.
ರಾಜಕಾಲುವೆ ಒತ್ತುವರಿ ಮಾಡಿ ಹಲವೆಡೆ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಪರಿಣಾಮ ಮಳೆ ವೇಳೆ ರಸ್ತೆಗಳು ಜಾವೃತಗೊಳ್ಳುತ್ತಿದ್ದು, ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದರಿಂದ ಜನರು ಸರ್ಕಾರ ಹಾಗೂ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದೀಗ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿರುವ 714 ಕಟ್ಟಡಗಳ ಪಟ್ಟಿ ಸಿದ್ಧಪಡಿಸಿರುವ ಬಿಬಿಎಂಪಿ ಶೀಘ್ರದಲ್ಲಿಯೇ ತೆರವು ಕಾರ್ಯಾಚರಣೆ ಆರಂಭಿಸಲಿದೆ. ಆದರೆ ಬಿಬಿಎಂಪಿ ನಿರ್ಧಾರಕ್ಕೆ ಇದೀಗ ಶಾಸಕರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಒತ್ತುವರಿ ತೆರವು ಕಾರ್ಯಾಚಾರಣೆಗೆ ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ತೆರವಿಗೆ ಮುಂದಾಗದಂತೆ ಬಿಬಿಎಂಪಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಆದರೆ ಒತ್ತವರಿ ತೆರವಿಗೆ ಮುಂದಾಗದಿದ್ದರೆ ಮಳೆ ಬಂದರೆ ನಗರದಲ್ಲಿ ಪ್ರವಾಹವುಂಟಾಗುವುದು ಎಂಬ ಆತಂಕವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.