ಬೆಂಗಳೂರು: ರಾಜಕಾಲುವೆ ಕಾಮಗಾರಿ ವೇಳೆ ಸ್ಲ್ಯಾಬ್ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಬಸವನಗುಡಿ ಬಳಿ ನಡೆದಿದೆ.
ಬೆಂಗಳೂರಿನಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಲವೆಡೆ ರಾಜಕಾಲುವೆ ಕಾಮಗಾರಿಗಳು ಚುರುಕುಗೊಂಡಿದ್ದು, ಕಾಮಗಾರಿ ವೇಳೆ ಏಕಾಏಕಿ ಸ್ಲ್ಯಾಬ್ ಕುಸಿದು ಬಿದ್ದಿದೆ. ಪರಿಣಾಮ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.