ಮೈಸೂರು: ಮೇಕೆದಾಟು ಅಣೆಕಟ್ಟು ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಅಣ್ಣಾಮಲೈ ರಾಜಕೀಯಕ್ಕಾಗಿ ಉಪವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮೇಕೆದಾಟು ಯೋಜನೆಗಾಗಿ ಪ್ರಧಾನಿ ಮೋದಿ ಸರ್ಕಾರ ಡಿಪಿಆರ್ ಸಿದ್ಧಪಡಿಸಿ ವರದಿ ಸಲ್ಲಿಕೆ ಮಾಡಲು ಹೇಳಿದೆ. ಆದರೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಅಲ್ಲಿನ ರಾಜಕೀಯಕ್ಕಾಗಿ ಉಪವಾಸ ಮಾಡುತ್ತಿದ್ದಾರೆ. ಅದನ್ನು ಬೇಡ ಎಂದು ನಾವು ಹೇಳಲು ಆಗಲ್ಲ. ಈ ಬಗ್ಗೆ ನಮ್ಮಲ್ಲಿ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.
ರೈತರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಿದ್ಧ ಎಂದು ಹೇಳಿದ ಬೆನ್ನಲ್ಲೇ ಅಣ್ಣಾಮಲೈ, ಮೇಕೆದಾಟು ಯೋಜನೆ ವಿರೋಧಿಸಿ ಆ.5ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದಾರೆ.