ಬೆಂಗಳೂರು: ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆ ಬಗ್ಗೆ ಕಿಡಿಕಾರಿದ್ದಾರೆ.
ಬಿಜೆಪಿ ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023 ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ. ಇಡಿ ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿಗೆ ಅರಿವಾಗಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ
ರಾಜಕೀಯವನ್ನು ಕಚೇರಿಗಳಲ್ಲಿ ಮಾಡುವುದಲ್ಲ, ಪ್ರಶ್ನೆ ಮಾಡಿ ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ರಾಜಕಾರಣ ಮಾಡುವುದಲ್ಲ. ಆಫೀಸ್ ಗಳಲ್ಲಿ ರಾಜಕೀಯ ಮಾಡಿದರೆ ಅದಕ್ಕೆ ಅರ್ಥವಿಲ್ಲ ಎಂದು ಟ್ವೀಟ್ ಮೂಲಕ ಗುಡುಗಿದ್ದಾರೆ.