ಬೆಂಗಳೂರು: ನಾಳೆಯಿಂದ ಪದವಿಪೂರ್ವ ಹಾಗೂ ಡಿಗ್ರಿ ಕಾಲೇಜುಗಳು ಆರಂಭವಾಗುತ್ತಿದ್ದು, ಹೈಕೋರ್ಟ್ ಆದೇಶಕ್ಕೆ ವಿದ್ಯಾರ್ಥಿಗಳು ಗೌರವ ನೀಡುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಯಾವುದೇ ಪ್ರಚೋದನೆಗಳಿಗೆ ಒಳಗಾಗಿ, ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ, ಶಿಕ್ಷಣವನ್ನು ಹಾಳು ಮಾಡಿಕೊಳ್ಳಬಾರದು. ನಾಳೆಯಿಂದ ಕಾಲೇಜುಗಳು ಆರಂಭವಾಗುತ್ತಿವೆ. ಶಿಕ್ಷಣದತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.
13 ವರ್ಷದ ಬಾಲಕಿ ಅಭಿವೃದ್ಧಿಪಡಿಸಿದ ಆ್ಯಪ್ ನಲ್ಲಿ 50 ಲಕ್ಷ ರೂ. ಹೂಡಿಕೆ
ವಿದ್ಯಾರ್ಥಿಗಳು ಯಾವುದೇ ಕೇಸರಿ ಶಾಲು, ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುವಂತಿಲ್ಲ. ಹೈಕೋರ್ಟ್ ಆದೇಶ ಪಾಲಿಸಬೇಕು. ವಿದ್ಯಾರ್ಥಿಗಳ ಮನವೊಲಿಕೆ ಕೆಲಸವನ್ನು ಸಂಸ್ಥೆಗಳು ಮಾಡುತ್ತಿವೆ. ಯಾರೂ ಕೂಡ ರಾಜಕೀಯ ನಾಯಕರ ಮಾತಿಗೆ ಬೆಲೆ ಕೊಡಬೇಡಿ ಎಂದು ತಿಳಿಸಿದರು.
ಇನ್ನು ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೂ ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ನಲ್ಲಿ ವಿದ್ಯಾರ್ಥಿನಿಯರ ಪರ ವಕೀಲರಿಂದ ಬೇಡಿಕೆ ಸಲ್ಲಿಸಲಾಗಿದೆ. ರಾಜಕೀಯ ನಾಯಕರ ಮಾತು ಕೇಳಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ, ತರಗತಿಗಳಿಗೆ ಹೋಗದೇ ಹಠ ಹಿಡಿದು ಕುಳಿತರೆ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ಯೋಚಿಸಬೇಕು ಎಂದರು.