2021-22 ನೇ ಸಾಲಿನ ಆರ್ಥಿಕ ವರ್ಷದಲ್ಲಿ ರಾಜಕೀಯ ಪಕ್ಷಗಳಿಗೆ ಬರೋಬ್ಬರಿ 3,289 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದ್ದು, ಈ ಪೈಕಿ ಬಿಜೆಪಿ ಸಿಂಹಪಾಲು ಪಡೆದಿದೆ. ಅಚ್ಚರಿಯ ಸಂಗತಿ ಎಂದರೆ ನಂತರದ ಸ್ಥಾನದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣ ಮೂಲ ಕಾಂಗ್ರೆಸ್ ಪಕ್ಷ ಇದೆ.
ಬಿಜೆಪಿಗೆ ಅತ್ಯಧಿಕ ಅಂದರೆ ಒಟ್ಟು ದೇಣಿಗೆಯ ಪೈಕಿ ಅರ್ಧಕ್ಕಿಂತ ಜಾಸ್ತಿ ಪಾಲಿದ್ದು, 1,917 ಕೋಟಿ ರೂಪಾಯಿ ದೇಣಿಗೆ ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿರುವ ತೃಣ ಮೂಲ ಕಾಂಗ್ರೆಸ್ ಪಕ್ಷ 545.745 ಕೋಟಿ ರೂಪಾಯಿ ಸಂಗ್ರಹಿಸಿದೆ. ಇದೇ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ 541.275 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದೆ.
ಚುನಾವಣಾ ಆಯೋಗಕ್ಕೆ ರಾಜಕೀಯ ಪಕ್ಷಗಳು ಸಲ್ಲಿಸಿರುವ ದಾಖಲೆಗಳನ್ನು ಉಲ್ಲೇಖಿಸಿ ಚುನಾವಣಾ ಸುಧಾರಣೆಗಳಿಗಾಗಿ ಕೆಲಸ ಮಾಡುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಈ ವರದಿಯನ್ನು ಬಿಡುಗಡೆ ಮಾಡಿದ್ದು, ರಾಜಕೀಯ ಪಕ್ಷಗಳ ಖರ್ಚಿನ ವಿವರವನ್ನು ಸಹ ತಿಳಿಸಿದೆ.