alex Certify BIG NEWS: ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ; ಪ್ರಧಾನಿ ಮೋದಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ; ಪ್ರಧಾನಿ ಮೋದಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಸೈನಿಕರ ಪಿಂಚಣಿ‌ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ? ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು. ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ. ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು.

ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ.‌ ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...