ಬೆಂಗಳೂರು: ಸಚಿವ ಶ್ರೀರಾಮುಲು ಆಪ್ತ ರಾಜಣ್ಣ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
BIG NEWS: ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಪರೋಕ್ಷ ಅಸಮಾಧಾನ; ಗಮನಕ್ಕೆ ತರದೇ ಕ್ರಮ ಸರಿಯಲ್ಲ ಎಂದ ಸಚಿವ
ನನ್ನನ್ನು ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದಿರಬೇಕು ಎಂದು ಮನವಿ ಮಾಡಿದ್ದಾರೆ.