ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ಆರಂಭಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಇಂದು ಕರವೇ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರೆ, ಇನ್ನೊಂದೆಡೆ ಕನ್ನಡಪರ ಚಳುವಳಿಗಾರರು ನಾಳೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿ ಧರಣಿ ನಡೆಸಿದ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕರುನಾಡು ನಾಳೆ ಸಂಪೂರ್ಣ ಸ್ತಬ್ಧಗೊಳ್ಳಲಿದೆ. ಸ್ವಾಭಿಮಾನಿ ಕನ್ನಡಿಗರು ಬಂದ್ ನಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ.
’ಯಾರ ಕೈಲಿ ಯಾವಾಗ ಏನೆಲ್ಲಾ ಇರುತ್ತೋ, ರಾಜೀವ್ ಗಾಂಧಿಗೆ ಏನಾಯ್ತು ಅಂತ ಗೊತ್ತಲ್ಲ…? ಸೆಲ್ಫಿ ತೆಗೆಯಲು ಬಂದಿದ್ದ ವ್ಯಕ್ತಿ ಮೇಲೆ ರೇಗಾಡಿದ್ದನ್ನು ಸಮರ್ಥಿಸಿಕೊಂಡ ಡಿಕೆಶಿ
ಬಂದ್ ಗೆ ಯಾರು ಬೆಂಬಲ ನೀಡಲಿ ಬಿಡಲಿ, ನಾಳೆ ನಾವು ಬಂದ್ ಮಾಡಿಯೇ ಮಾಡುತ್ತೇವೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕಾರ ನೀಡಬೇಕು. ಕರ್ನಾಟಕದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಇರಕೂಡದು. ರಾಜ್ಯದಲ್ಲಿ ಎಂಇಎಸ್ ಪುಂಡಾಟಕ್ಕೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.