ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಕಿಕ ಕೃತ್ಯ ನಡೆದಿದ್ದು, ಯುವತಿಯೊಬ್ಬಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಯುವತಿಯನ್ನು ಬಿಟಿಎಂ ಲೇಔಟ್ ನಿಂದ ಪಿಕಪ್ ಮಾಡಿದ್ದ ಯುವಕರು, ಆಕೆಯನ್ನು ಎಲೆಕ್ಟ್ರಾನಿಕ್ ಸಿಟಿ ಮನೆಗೆ ಬಿಡಬೇಕಾಗಿತ್ತು. ಆದರೆ ಯುವತಿಯನ್ನು ತಮ್ಮ ರೂಮಿಗೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ರ್ಯಾಪಿಡೋ ಬೈಕ್ ಸವಾರ ಹಾಗೂ ಆತನ ಸ್ನೇಹಿತನಿಂದ ಕೃತ್ಯವೆಸಗಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ.