ಕಲಬುರ್ಗಿ: ರಾಜ್ಯದಲ್ಲಿ ಕಳೆದ 2 ವಾರಗಳಿಂದ ಕೊರೊನಾ ಸೋಂಕು ಹೆಚ್ಚುತ್ತಿದೆ. ಸೋಂಕು ನಿಯಂತ್ರಣಕ್ಕೆ ಅಗತ್ಯ ಕಠಿಣ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಸೋಂಕು ಎದುರಿಸುವ ನಿಟ್ಟಿನಲ್ಲಿ ಸವಾಲುಗಳಿವೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ. ಏರ್ ಪೋರ್ಟ್, ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಬೇಕಿದೆ ಎಂದರು.
ಒಮಿಕ್ರಾನ್ ಭೀತಿ, ಐದು ಜಿಲ್ಲೆಗಳಲ್ಲಿ ಕಠಿಣ ನಿಯಮ ಹೇರಿದ ಹರಿಯಾಣ ಸರ್ಕಾರ
ಕೋವಿಡ್ ಹಾಗೂ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವುದರಿಂದ ನಾವು ಮತ್ತಷ್ಟು ಜಾಗೃತಿ ವಹಿಸಬೇಕಿದೆ. ಸಂಜೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.