alex Certify BIG NEWS: ರಾಜ್ಯಕ್ಕೂ ಕಾಲಿಟ್ಟ ನಿಫಾ ವೈರಸ್…!; ಓರ್ವ ಯುವಕನಲ್ಲಿ ಸೋಂಕಿನ ಲಕ್ಷಣ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಕ್ಕೂ ಕಾಲಿಟ್ಟ ನಿಫಾ ವೈರಸ್…!; ಓರ್ವ ಯುವಕನಲ್ಲಿ ಸೋಂಕಿನ ಲಕ್ಷಣ ಪತ್ತೆ

ಮಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇದೀಗ ನಿಫಾ ವೈರಸ್ ಭೀತಿ ಎದುರಾಗಿದ್ದು ಪಕ್ಕದ ಕೇರಳದ ಬಳಿಕ ಇದೀಗ ರಾಜ್ಯದಲ್ಲಿಯೂ ನಿಫಾ ಸೋಂಕು ಪತ್ತೆಯಾಗಿದೆ.

ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕನಲ್ಲಿ ನಿಫಾ ವೈರಸ್ ಲಕ್ಷಣಗಳು ಕಂಡುಬಂದಿದ್ದು, ಸ್ವ್ಯಾಬ್ ಹಾಗೂ ರಕ್ತದ ಮಾದರಿಯನ್ನು ಪುಣೆ ಲ್ಯಾಬ್ ಗೆ ರವಾನೆ ಮಾಡಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ವ್ಯಕ್ತಿಯ ಸ್ಯಾಂಪಲ್ ಕಳುಹಿಸಿದ್ದು, ವರದಿಗಾಗಿ ಕಾಯಲಾಗುತ್ತಿದೆ.

24 ವರ್ಷದ ಯುವಕನೊಂದಿಗೆ ವೈವಾಹಿಕ ಬದುಕಿಗೆ ಕಾಲಿಟ್ಟ 61 ರ ವೃದ್ದೆ…!

ಈಗಾಗಲೇ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚುತ್ತಿದ್ದು, ಇತ್ತೀಚೆಗೆ 12 ವರ್ಷದ ಬಾಲಕ ಸಾವನ್ನಪ್ಪಿದ್ದ. ಅದಾದ ಬಳಿಕ ಆತನ ಕುಟುಂಬದ 8 ಜನರಲ್ಲಿ ನಿಫಾ ಲಕ್ಷಣಗಳು ಕಂಡು ಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಇದೀಗ ಮಂಗಳೂರಿನಲ್ಲಿ ಯುವಕನಲ್ಲಿ ನಿಫಾ ಲಕ್ಷಣ ಕಂಡುಬಂದಿರುವುದು ರಾಜ್ಯದಲ್ಲಿಯೂ ಇನ್ನಷ್ಟು ಆತಂಕ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...