ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮೇ 3ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ರಾಜ್ಯ ಬಿಜೆಪಿ ಕಚೇರಿಗೂ ಭೇಟಿ ನೀಡಿ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಅಮಿತ್ ಶಾ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಬಹುದೆಂಬ ವಿಚಾರ ಮುನ್ನೆಲೆಗೆ ಬಂದಿದ್ದು, ಹೀಗಾಗಿ ಸಚಿವಾಕಾಂಕ್ಷಿಗಳ ರಾಜಕೀಯ ಚಟುವಟಿಕೆ ಗರಿಗೆದರಿದೆ.
ಸಂಪುಟ ವಿಸ್ತರಣೆಯಾಗುತ್ತದೋ ಅಥವಾ ಪುನರ್ರಚನೆಯೋ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದ್ದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಬಹುದೆಂಬ ಮಾತುಗಳು ಕೇಳಿಬರುತ್ತಿವೆ.