ಬೆಂಗಳೂರು: ದೇಶದಲ್ಲಿ ಕೊರೊನಾ ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾದ ಡೆಲ್ಟಾ ಪ್ಲಸ್ ವೈರಸ್ ರಾಜ್ಯಕ್ಕೂ ಕಾಲಿಟ್ಟಿದ್ದು, ರಾಜ್ಯದಲ್ಲಿ ಇಬ್ಬರಲ್ಲಿ ಈ ಮಾದರಿಯ ವೈರಸ್ ಪತ್ತೆಯಾಗಿದ್ದಾಗಿ ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಚಾಲನೆ
ರಾಜಧಾನಿ ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದ್ದು, ಸದ್ಯದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಎರಡು ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿದೆ ಎಂದು ಸಚಿವರು ಖಚಿತಪಡಿಸಿದ್ದಾರೆ.
ʼಮಾಸ್ಕ್ʼ ಹಾಕದ ಮಂದಿಗೆ ಹೀಗೆ ಮಾಡಿದ್ರೆ ಹೇಗೆ…? ಫನ್ನಿ ವಿಡಿಯೋ ಶೇರ್ ಮಾಡಿದ ಉದ್ಯಮಿ ಗೋಯೆಂಕಾ
ಭಾರತದಲ್ಲಿ 40ಕ್ಕೂ ಹೆಚ್ಚು ಡೆಲ್ಟಾ ಪ್ಲಸ್ ಕೇಸ್ ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 21, ಕೇರಳದಲ್ಲಿ 3 ಹಾಗೂ ಮಧ್ಯಪ್ರದೇಶದಲ್ಲಿ 1 ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ಡೆಲ್ಟಾ ಪ್ಲಸ್ ವೈರಸ್ ಸಾಮಾನ್ಯ ರೂಪಾಂತರಿಗಿಂತ ಹೆಚ್ಚು ಅಪಾಯಕಾರಿಯಾಗಿದೆ ಎನ್ನಲಾಗಿದೆ. ಒಟ್ಟಾರೆ ರಾಜ್ಯಕ್ಕೂ ಡೇಂಜರಸ್ ವೈರಸ್ ಕಾಲಿಟ್ಟಿರುವುದು ಖಚಿತವಾಗಿದ್ದು, ಮುಂದಿನ ದಿನಗಳಲ್ಲಿ ಕರುನಾಡಿಗೆ ಇನ್ನಷ್ಟು ಗಂಡಾಂತರಗಳನ್ನು ತಂದೊಡ್ಡಲಿದೆಯೇ ಎಂಬ ಆತಂಕ ಎದುರಾಗಿದೆ.