alex Certify BIG NEWS: ರಾಜ್ಯದಲ್ಲಿಂದು 399 ಜನರಿಗೆ ಸೋಂಕು ದೃಢ, 6 ಮಂದಿ ಸಾವು; ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 399 ಜನರಿಗೆ ಸೋಂಕು ದೃಢ, 6 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು : ಓಮಿಕ್ರಾನ್ ಆತಂಕದ ನಡುವೆಯೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದ್ದು, ಜನರಲ್ಲಿ ಆತಂಕ ಮನೆ ಮಾಡುತ್ತಿದೆ.

ಇಂದು ರಾಜ್ಯದಲ್ಲಿ 399 ಜನರಲ್ಲಿ ವೈರಸ್ ಕಾಣಿಸಿಕೊಂಡಿದ್ದು, 6 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿನ ಮೂವರು ಹಾಗೂ ತುಮಕೂರು, ಕೊಪ್ಪಳ ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇಂದು 399 ಜನರು ಸೇರಿದಂತೆ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 29,99,098ಕ್ಕೆ ಏರಿಕೆ ಕಂಡಿದೆ. ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,249ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಇಂದು ಬೆಂಗಳೂರಿನಲ್ಲಿ ಕೂಡ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 244 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,58,119ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಸಾವನ್ನಪ್ಪಿದವರ ಒಟ್ಟು ಸಂಖ್ಯೆ 16,354ಕ್ಕೆ ಏರಿಕೆ ಕಂಡಿದೆ.

ಇಂದು ಬೆಂಗಳೂರು ಹೊರತು ಪಡಿಸಿದರೆ ಮೈಸೂರಿನಲ್ಲಿ ಹೆಚ್ಚು ಪ್ರಕರಣಗಳ ವರದಿಯಾಗಿವೆ. ಮೈಸೂರಿನಲ್ಲಿ 38, ಕೊಡಗಿನಲ್ಲಿ 30 ಪ್ರರಣಗಳು ದಾಖಲಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...